ಮಾಜಿ ಸಚಿವ ಡಾ.ವೈ ನಾಗಪ್ಪ ನಿಧನ-Times Of Karkala

ದಾವಣಗೆರೆ,ಅ.27:ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಧರಂ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಡಾ.ವೈ ನಾಗಪ್ಪ (75) ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ.1989, 1999 ಹಾಗೂ 2004 ರಲ್ಲಿ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.1980 ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗಪ್ಪ ಆಗ ಶಾಸಕರಾಗಿದ್ದ ಹೆಚ್ ಶಿವಪ್ಪ ಇವರನ್ನು ಪದೇ ಪದೇ ವರ್ಗಾವಣೆ ಮಾಡಿಸಿದಾಗ ಬೇಸತ್ತು ನೀನು ಮನಸ್ಸು ಮಾಡಿದರೆ ಡಾಕ್ಟರ್ ಆಗೋದಕ್ಕೆ ಆಗಲ್ಲ. ಆದರೆ ನಾನು ಮನಸ್ಸು ಮಾಡಿದರೆ ಎಂಎಲ್‌ಎ ಆಗುತ್ತೇನೆ ಎಂದು ಚಾಲೆಂಜ್ ಮಾಡಿದ್ದರು.
ಹೀಗೆ ಆಕಸ್ಮಿಕವಾಗಿ ರಾಜಕಾರಣಕ್ಕೆ ಧುಮುಕಿದ ನಾಗಪ್ಪ ಹರಿಹರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ನಂತರ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.ಜಾಹೀರಾತುhttps://www.timesofkarkala.in/2020/10/blog-post_8.html


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget