ಹೆಬ್ರಿ : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಹೆಬ್ರಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಹೆಬ್ರಿ ಎಚ್. ರಮೇಶ್ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿಯಾಗಿರುವ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್ ರಾಯಚೂರು ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಧ್ಯಕ್ಷರಾದ ವಿಧಾನ ಪರಿಷತ್ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ಬುಧವಾರ ನೇಮಕ ಮಾಡಿದ್ದಾರೆ.

ಹೆಬ್ರಿಯ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ, ಹೆಬ್ರಿಯ ಗ್ರಾಮ ಪಂಚಾಯತ್ ಸದಸ್ಯರಾಗಿ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಲಯನ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಹಿತ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸಿದ್ದರು.
ಉದ್ಯಮಿ ಯಾಗಿರುವ ಎಚ್. ರಮೇಶ್ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿದ್ದಾರೆ. ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಹೆಬ್ರಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಪತ್ರಕರ್ತ ರಾದ ಸುಕುಮಾರ್ ಮುನಿಯಾಲ್ ಅವರನ್ನು ನೇಮಿಸಲಾಗಿದೆ.
Post a comment