4 ವರ್ಷ ಮೇಲ್ಪಟ್ಟ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ-Times Of Karkala

 ಬೆಂಗಳೂರು,ಅ.20:ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಲು ಸರಕಾರ ಮುಂದಾಗಿದೆ.ಮುಂಬದಿ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲದಿದ್ದರೆ ದಂಡದ ಜತೆಗೆ 3 ತಿಂಗಳು ಲೈಸನ್ಸ್ ಅಮಾನತುಗೊಳಿಸುವ  ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಸಾಂದರ್ಭಿಕ ಚಿತ್ರ 

ನಾಲ್ಕು ವರ್ಷದ ಮಕ್ಕಳಿಂದ ಹಿಡಿದು ಎಲ್ಲರೂ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಲಿದೆ.
ಕೇಂದ್ರ ದ್ವಿಚಕ್ರ ವಾಹನ ನಿಯಮದ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಕರ್ನಾಟಕ ಮೋಟಾರ್ ವಾಹನ ನಿಯಮದ ಪ್ರಕಾರ ಕೂಡ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದ ಮೇರೆಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಯಮ ಜಾರಿಗೊಳಿಸಲು ಸೂಚಿಸಲಾಗಿದೆ. 


ಜಾಹೀರಾತು




https://www.timesofkarkala.in/2020/10/blog-post_8.html















Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget