ಮಲ್ಪೆ:ಬಂದರಿನಲ್ಲಿ 17 ಮಕ್ಕಳ ರಕ್ಷಣೆ-Times Of Karkala


ಮಲ್ಪೆ,ಅ.29:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಮಕ್ಕಳ ಸಹಾಯವಾಣಿ ಹಾಗೂ ನಾಗರೀಕ ಸೇವಾ ಟ್ರಸ್ಟ್ ಉಡುಪಿ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. 


ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ರಕ್ಷಣಾಧಿಕಾರಿ ಮಹೇಶ್ ದೇವಾಡಿಗ ಕಾರ್ಮಿಕ ಅಧಿಕಾರಿ ಕುಮಾರ್ ಕಾರ್ಮಿಕ ನಿರೀಕ್ಷಕ ಪ್ರವೀಣ್ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೇಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸವಿತಾ ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದ ಸಂಸ್ಥೆ ಶಂಕರಪುರದ ಕ್ರಿಸ್ಟೋಫರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 





ಜಾಹೀರಾತು



https://www.timesofkarkala.in/2020/10/blog-post_8.html















Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget