ಮಂಗಳೂರು,ಅ,8: ಶ್ರೀ ಜೆ ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ಹಾಗೂ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಸುರತ್ಕಲ್, ಇದರ ಸಹಕಾರದೊಂದಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮವು ಶ್ರೀ ಕೊರಗಪ್ಪ ಕಲ್ಯಾಣ ಮಂಟಪ ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿಯಲ್ಲಿ ಅಕ್ಟೋಬರ್ 4 ರಂದು ನಡೆಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ೧೭೨ ವಿದ್ಯಾರ್ಥಿಗಳಿಗೆ ಒಟ್ಟು ೧೦ ಲಕ್ಷ ರೂ ಪ್ರೋತ್ಸಾಹಧನ ವಿತರಿಸಲಾಯಿತು.
Post a comment