ಕಾರ್ಕಳ,ಅ.26: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 21ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಿದ "ತಿಂಗಳ ಸಂಭ್ರಮ" ಕಾರ್ಯಕ್ರಮದ ಮೂಲಕ ಮಂಜರಪಲ್ಕೆಯ ಕಳೆದ 33 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಾಧು ಮೂಲ್ಯರವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ರಿಕ್ಷಾ ಚಾಲಕರು ಸದಾ ಜನಸಾಮಾನ್ಯರ ಆಪತ್ಬಾಂಧವರಾಗಿದ್ದು, ಯಾವುದೇ ಸಮಸ್ಯೆ ಬಂದಾಗಲೂ ಮೊದಲು ರಿಕ್ಷಾ ಚಾಲಕರನ್ನು ನೆನಪಿಸಿಕೊಳ್ಳುತ್ತೇವೆ. ರಿಕ್ಷಾ ಚಾಲಕರು ಶ್ರಮಜೀವಿಗಳಾಗಿದ್ದು ಅವರ ಸೇವೆಯನ್ನು ಗುರುತಿಸುವಂತಹ ಕೆಲಸ ಸಂಘ ಸಂಸ್ಥೆಗಳಿಂದ ಆಗಬೇಕು ಎಂದು ನಂದಳಿಕೆಯ ಅಬ್ಬನಡ್ಕದ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ಪೂಜಾರಿ ಹೇಳಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸಂಘದ ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ, ಜತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಕೋಶಾಧಿಕಾರಿ ವೀಣಾ ಪೂಜಾರಿ ಸದಸ್ಯರಾದ ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಸಂಧ್ಯಾ ಶೆಟ್ಟಿ, ಲೀಲಾ ಪೂಜಾರಿ, ಅಶ್ವಿನಿ ಪ್ರಭಾಕರ್, ಸುನಿತಾ ಪಿಂಟೊ, ಅಶ್ವಿನಿ ಪೂಜಾರಿ ಉಪಸ್ಥಿತರಿದ್ದರು.
Post a comment