ಮಂಗಳೂರು,ಅ,4: ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ,ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ವೆಲೆನ್ಸಿಯಾದ ಈ ಪ್ಲ್ಯಾಟ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment