ಮೂಡುಬಿದಿರೆ:ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವು -Times of karkala

ಮೂಡುಬಿದಿರೆ:ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ  ಮೂಡುಬಿದಿರೆಯ  ಶಿಕ್ಷಕಿ ಪದ್ಮಾಕ್ಷಿ ಇಂದು ಮೃತಪಟ್ಟಿದ್ದಾರೆ.

ಇವರಿಗೆ ಸೆ. 29ರಂದು ಕೋವಿಡ್-19 ದೃಢಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ತಾಯಿಯ ಚಿಕಿತ್ಸೆಗೆ ಸಹಕರಿಸುವಂತೆ ಕೋರಿ ಪುತ್ರಿ ಐಶ್ವರ್ಯಾ ಫೇಸ್ ಬುಕ್ ನಲ್ಲಿ ಮಾಡಿದ್ದರು. ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಇಂದು ಸಾವನ್ನಪ್ಪಿದ್ದಾರೆ.


ಕೋವಿಡ್ ನೆಗೆಟಿವ್ ಎಂದು ಕಂಡುಬಂದಿದ್ದರೂ ಪದ್ಮಾಕ್ಷಿ ಅವರ ಆರೋಗ್ಯಸ್ಥಿತಿ ಗುರುವಾರ ಅಪರಾಹ್ನ ವಿಷಮಿಸತೊಡಗಿದ ಕಾರಣ ಪತಿ ಶಶಿಕಾಂತ್ , ಪುತ್ರಿ ಐಶ್ವರ್ಯ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಎಕ್ಮೋ ಚಿಕಿತ್ಸೆಗಾಗಿ ಏರ್ ಲಿಫ್ಟ್ ಮೂಲಕ ಬೆಂಗಳೂರು ಗೆ ಒಯ್ಯಲು ಸಿದ್ಧತೆ ನಡೆಸಿದ್ದರು. 


ಜಾಹೀರಾತು




https://www.timesofkarkala.in/2020/10/blog-post_8.html













Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget