ಕಾರ್ಕಳ,ಅ,7 : ಇತ್ತೀಚೆಗೆ ರಾಜಸ್ಥಾನ ಉದಯಪುರದ ಪೆಸಿಫಿಕ್ ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗವು ಆಯೋಜಿಸಿದ್ದ "ಸ್ವಚ್ಛ ಪರಿಸರಕ್ಕಾಗಿ ಹಸಿರು ರಸಾಯನಶಾಸ್ತ್ರ" ಎಂಬ ಅಂತರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ತನ್ನ ಸಂಶೋಧನ ಪ್ರಬಂಧವನ್ನು ಮಂಡಿಸಿ "ಯುವ ವಿಜ್ಞಾನಿ ಪ್ರಶಸ್ತಿ" ಗೆ ಭಾಜನರಾದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕ ಶ್ರೀ ಪ್ರಜ್ವಲ್ ಕುಲಾಲ್ ಇವರನ್ನು ಅಜೆಕಾರ್ ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ನ ವತಿಯಿಂದ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳದ ಆಡಳಿತಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ್ ಸನ್ಮಾನವನ್ನು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಪಿ.ಜಿ.ಇ.ಟಿ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟಿ ಕರುಣಾರ ಶೆಟ್ಟಿ, ಪ್ರಾಂಶುಪಾಲ ದಿನೇಶ್ ಎಂ ಕೊಡವೂರು, ಉಪ ಪ್ರಾಂಶುಪಾಲ ಸಾಹಿತ್ಯ ಉಪಸ್ಥಿತರಿದ್ದರು. ಉಪನ್ಯಾಸಕ, ಸ್ಟೂಡೆಂಟ್ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು ಸ್ವಾಗತಿಸಿ, ಪಿ.ಆರ್.ಓ ಜ್ಯೋತಿಪದ್ಮನಾಭ ಭಂಡಿ ವಂದಿಸಿದರು. ಕುಮಾರಿ ಶಮಿತ ಕಾರ್ಯಕ್ರಮ ನಿರೂಪಿಸಿದರು.
Post a comment