ನವದೆಹಲಿ,ಅ,8: ಭಾರತದಲ್ಲಿ ಕೋವಿಡ್ -19 ವಿರುದ್ಧ ಹೋರಾಟ ಜನಸ್ನೇಹಿಯಾಗಿದ್ದು, ಕೊರೊನ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೋವಿಡ್ ವಾರಿಯರ್ ಗಳಿಂದಾಗಿ ಕೊರೊನ ವಿರುದ್ಧ ಹೋರಾಟಕ್ಕೆ ಹೆಚ್ಚಿನ ಬಲ ಸಿಕ್ಕಿದೆ. ನಮ್ಮ ಸಾಮೂಹಿಕ ಪ್ರಯತ್ನದಿಂದ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗಿದೆ. ಈ ಪ್ರಯತ್ನವನ್ನು ಮುಂದುವರೆಸಿ ನಾಗರಿಕರನ್ನು ಭಯಾನಕ ಕೋವಿಡ್ ವೈರಸ್ ನಿಂದ ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟವನ್ನು ಮುಂದುವರಿಸಬೇಕಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಕೊರೊನ ಮದ್ಯೆಯೇ ಇಂದು ಬದುಕು ಕಟ್ಟಿಕೊಳ್ಳಬೇಕಾಗಿದೆ. ಆರ್ಥಿಕ ಸಂಷ್ಟದ ಮಧ್ಯೆ ಹೊರಗೆ ಹೋಗಿ ಕೆಲಸ ಮಾಡಬೇಕಾಗಿದೆ. ಹಿರಿಯ ನಾಗರಿಕರು ಆದಷ್ಟು ಎಚ್ಚರ ವಹಿಸಬೇಕಾಗಿದೆ. ಮಾಸ್ಕ ಧರಿಸುವುದು, ಕೈ ತೊಳೆಯುವುದು, ಎರಡು ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬೇಡಿ ಎಂದು ಅವರು ನೆನಪಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ದೇಶದಲ್ಲಿ 50 ಸಾವಿರವಿದ್ದ ಕೊರೊನ ಸೋಂಕಿತರ ಸಂಖ್ಯೆ ಅಕ್ಟೋಬರ್ ವೇಳೆಗೆ 57 ಲಕ್ಷ ತಲುಪಿದೆ. ಈ ಮಧ್ಯೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಪ್ರಸ್ತುತ ಸಕ್ರಿಯ ಕೇಸುಗಳು ಶೇಕಡಾ 13.4 ರಷ್ಟಿದ್ದರೆ, ಗುಣಮುಖರಾಗುತ್ತಿರುವವರ ಪ್ರಮಾಣ ಶೇಕಡಾ 6.3ರಷ್ಟಿದೆ.
Post a comment