ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಹಾಗು ನಿರ್ಗಮನಕ್ಕೆ ಹೇರಿದ್ದ ನಿರ್ಬಂಧಗಳ ಸಡಿಲಿಕೆ-Times Of Karkala

ನವದೆಹಲಿ,ಅ.22: ಕೋವಿಡ್-19 ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ  ಪ್ರಯಾಣಿಕರ ಆಗಮನ ಹಾಗು ನಿರ್ಗಮನಕ್ಕೆ ಹೇರಿದ್ದ ನಿರ್ಬಂಧಗಳನ್ನು ಸಡಿಲಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. 


ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿದ್ದು, ಅ ಮೂಲಕ ದೇಶಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ಭಾರತೀಯರು ಹಾಗೂ ವಿದೇಶಿ ಪ್ರಜೆಗಳಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಭಾರತಕ್ಕೆ ಯಾವುದೇ ಉದ್ದೇಶಕ್ಕೆ ಆಗಮಿಸುವ ಎಲ್ಲ  ವಿದೇಶಿ ಪ್ರಜೆಗಳಿಗೆ ಮತ್ತು ಓಸಿಆಯ್ ಮತ್ತು ಪಿ ಐ ಓ ಕಾರ್ಡ್ ಹೊಂದಿದವರಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ.         

*ಅಧಿಕೃತ ವಿಮಾನ ನಿಲ್ದಾಣಗಳು ಮತ್ತು ಬಂದರುಗಳ ತಪಾಸಣಾ ಕೇಂದ್ರಗಳ ಮೂಲಕ ಪ್ರವೇಶಿಸಲು ಅವಕಾಶವಿದೆ. 

ವಂದೇ ಭರತ್ ಮಿಷನ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಮಾನಗಳು , ವಾಯು ಸಾರಿಗೆ ಬಬಲ್ ವ್ಯವಸ್ಥೆ  ಅಥವಾ ನಾಗರೀಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿರುವ ಯಾವುದೇ ನಿಗದಿಯಾಗದ ವಾಣಿಜ್ಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. 

*ಎಲ್ಲ ಪ್ರಯಾಣಿಕರು ಕ್ವಾರಂಟೈನ್ ಹಾಗೂ  ಕೋವಿಡ್-19 
ವಿಚಾರಕ್ಕೆ ಸಂಬಂಧಿಸಿ ಕುಟುಂಬ ಮತ್ತು ಅರೋಗ್ಯ ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು.

*ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಹಾಲಿ ಇರುವ ವೀಸಾಗಳು(ಇಲೆಕ್ಟ್ರಾನಿಕ್ ವೀಸಾ, ಪ್ರವಾಸಿ ವೀಸಾ ಮತ್ತು ವೈದ್ಯಕೀಯ ವೀಸಾ ಹೊರತು ಪಡಿಸಿ) ಪುನರ್ ಜಾರಿಗೆ ಬರಲಿವೆ.  ಒಂದು ವೇಳೆ ಅಂತಹ ವೀಸಾಗಳ ಅವಧಿ ಮುಗಿದಿದ್ದರೆ ಸಂಬಂಧಿಸಿದ ಭಾರತೀಯ ರಾಯಭಾರ ಕಚೇರಿಯಿಂದ ಸೂಕ್ತ ವರ್ಗದಡಿ ಹೊಸ ವಿಶಗಳನ್ನು ಪಡೆಯಬಹುದಾಗಿದೆ.  

*ಯಾವುದೇ ವಿದೇಶಿಯರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಭೇಟಿ ನೀಡಲು ಬಯಸಿದರೆ ಅವರು ತಮ್ಮ ಪರಿಚಾರಕರು ಸೇರಿದಂತೆ ಪ್ರತ್ಯೇಕ ವೀಸಾಕ್ಕೆ ಅರ್ಜಿ ಸಲ್ಲಿಸಬಹುದು. 

*ಈ ನಿರ್ಧಾರದಿಂದ ವಿದೇಶಿ ಪ್ರಜೆಗಳು ವಾಣಿಜ್ಯ ಸಮಾವೇಶಗಳಲ್ಲಿ ಪಾಲ್ಗೊಳ್ಳಲು, ಉದ್ಯೋಗ, ಅಧ್ಯಯನ, ಸಂಶೋಧನೆ, ವೈದ್ಯಕೀಯ ಉದ್ದೇಶ ಸೇರಿದಂತೆ ಇಯಾತರ ಉದ್ದೇಶಗಳಿಗೆ ಭಾರತಕ್ಕೆ ಬರಲು ಅನುಕೂಲವಾಗಲಿದೆ.   
       


ಜಾಹೀರಾತು
https://www.timesofkarkala.in/2020/10/blog-post_8.html

             
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget