ಉಡುಪಿ: ಜಿಲ್ಲೆಯಲ್ಲಿ 73.39ಲಕ್ಷ ಮೌಲ್ಯದ ಮಾದಕ ದ್ರವ್ಯ ವಶ-Times Of Karkala

ಉಡುಪಿ,ಅ.17: ಉಡುಪಿ ಜಿಲ್ಲೆಯನ್ನು ಮಾದಕದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಸೆರೆಹಿಡಿಯಲಾಗಿದೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಪೊಲೀಸ್ ಅಧೀಕ್ಷಕ ಎನ್ ವಿಷ್ಣುವರ್ಧನ್,ಮೂರು ಪ್ರಕರಣಗಳಲ್ಲಿ 73,39,500 ರೂ ಮೌಲ್ಯದ ಸಿಂಥೆಟಿಕ್ ಡ್ರಗ್  ಅನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. 

ರೂ 30,57,000 ಮೌಲ್ಯದ ನಿಷೇಧಿತ MDMA Ecstasy 540 ಗ್ರಾಂ ತೂಕದ 1019 ಮಾತ್ರೆಗಳು, ರೂ 30 ಲಕ್ಷ ಮೌಲ್ಯದ 1000 ಎಲ್.ಎಸ್.ಡಿ. ಸ್ಟ್ಯಾಂಪ್ಸ್, ರೂ 3 ಲಕ್ಷ ಮೌಲ್ಯದ 30 ಗ್ರಾಂ ತೂಕದ ಬ್ರೌನ್ ಶುಗರ್ ಮತ್ತು ರೂ 9, 82, 500 ಮೌಲ್ಯದ 131 ಗ್ರಾಂ ತೂಕವುಳ್ಳ Superior Quality hydro weed ಗಾಂಜಾವನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 73,395,00 ಆಗಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. 

ಈ ವರ್ಷದಲ್ಲಿ ಗಾಂಜಾ ಸೇವನೆ ಮಾರಾಟ, ಸಾಗಾಟ, ವಿದ್ಯಾರ್ಥಿ ಹಾಗೂ ಸಾರ್ವಜನಿಕರ ವಿರುದ್ಧ ಒಟ್ಟು 200 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕಳೆದ 5 ವರ್ಷಗಳಲ್ಲಿ ದಾಖಲಿಸಿದೆ ಅತೀ ಹೆಚ್ಚು ಪ್ರಕರಣ ಗಳಾಗಿರುತ್ತದೆ. ಅಲ್ಲದೇ ಗಾಂಜಾ ಹೊರತುಪಡಿಸಿ Synthetic drugs ಅನ್ನು ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದರು.
ಮಾದಕ ವಸ್ತುಗಳ ಸಾಗಾಟ ಹಾಗೂ ಸೇವೆನೆ ಕುರಿತು ಕಾರ್ಯಾಚರಣೆಗಾಗಿ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಅವರ ಉಸ್ತುವಾರಿಯಲ್ಲಿ 3 ತಂಡಗಳನ್ನು ರಚಿಸಲಾಗಿದೆ. 

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ, ಹರಿರಾಂ ಶಂಕರ್, ಸಹಾಯಕ ಪೊಲೀಸ್ ಅಧೀಕ್ಷಕರು, ಕುಂದಾಪುರ ಉಪವಿಭಾಗ , ಭರತ್ ಎಸ್, ರೆಡ್ಡಿ, ಮೊಲೀಸ್ ಅಧೀಕ್ಷಕರು, ಕಾರ್ಕಳ ಉಪವಿಭಾಗ, ಮಂಜುನಾಥ, ಪೊಲೀಸ್ ವೃತ್ತ ನಿರೀಕ್ಷಕರು, ಉಡುಪಿ ವೃತ್ತ. ಮಂಜಪ್ಪ ಡಿ. ಆರ್. ಸೋಲಿಸ್ ನಿರೀಕ್ಷಕರು, ಮಂಜುನಾಥ ಎಂ., ಮೊಲೀಸ್ ನಿರೀಕ್ಷಕರು, ಮಣಿಪಾಲ ಠಾಣೆ, ರಾಜಶೇಖರ್ ವಂದಲಿ, ಪೊಲೀಸ್ ಉಪನಿರೀಕ್ಷಕರು ಮಣಿಪಾಲ ಠಾಣೆ ಮತ್ತು ಐಎಸ್ಡಿ ಉಡುಪಿ ಘಟಕ ಪೊಲೀಸ್ ನಿರೀಕ್ಷಕ ಮಧು ಉಪಸ್ಥಿತರಿದ್ದರು.

ಜಾಹೀರಾತು
https://www.timesofkarkala.in/2020/10/blog-post_8.html

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget