ಉಡುಪಿ,ಅ.9 : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುಂದಾಪುರದ ನೇರಂಬಳ್ಳಿ ರಮೇಶ್ ಆಚಾರ್ಯ ಅವರಿಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಬುಧವಾರ ಮಹಾಸಭಾದ ರಾಜ್ಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಸಮ್ಮುಖದಲ್ಲಿ ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪದಪ್ರದಾನ ಮಾಡಿದರು.
ಜಿಲ್ಲಾಧ್ಯಕ್ಷರ ನೇಮಕ ಪತ್ರ ಹಸ್ತಾಂತರಿಸಿ ಮಾತನಾಡಿದ ಮಹಾಸಭಾದ ರಾಜ್ಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ, ಅತೀ ಶೀಘ್ರವಾಗಿ ಮಹಾಸಭಾದ ಮೂಲಕ ವಿಶ್ವಕರ್ಮರನ್ನು ಯಶಸ್ವಿಯಾಗಿ ಸಂಘಟಿಸಬೇಕಿದೆ. ಸಮಾಜದಲ್ಲಿ ಮುಂಚೂಣಿಯಲ್ಲಿ ನಿಂತು ಜನರ ಸೇವೆ ಮಾಡವಂತೆ ಕರೆ ನೀಡಿದರು.ವಿಶ್ವಕರ್ಮರೆಲ್ಲರೂ ರಾಜ್ಯದಾದ್ಯಂತ ಒಂದೇ ಸಂಸ್ಥೆಯಡಿ ಸಂಘಟಿತರಾಗಬೇಕು. ರಾಜಕೀಯವಾಗಿಯೂ ಸಕ್ರೀಯರಾಗಬೇಕು ಎಂದು ಕೆ.ಪಿ.ನಂಜುಂಡಿ ಹೇಳಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುಂದಾಪುರದ ನೇರಂಬಳ್ಳಿ ರಮೇಶ್ ಆಚಾರ್ಯ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯರಾದ ರಘು ಆಚಾರ್, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಯುವ ಘಟಕದ ರಾಜ್ಯ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್, ಲಕ್ಷ್ಮೀ ಕೆ.ಪಿ.ನಂಜುಂಡಿ ಸಹಿತ ರಾಜ್ಯ ಮಟ್ಟದ ವಿಶ್ವಕರ್ಮ ಸಮಾಜದ ಮುಖಂಡರು ಭಾಗವಹಿಸಿದ್ದರು.
Post a comment