ಮಂಗಳೂರು ,ಅ,7: ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಮುಜರಾಯಿ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 
ಜಿಲ್ಲಾಧಿಕಾರಿ ಕಚೇರಿಯಲ್ಲಿ ಯಕ್ಷಗಾನ ಮೇಳಗಳ ಸಂಚಾಲಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಳೆದ ಎಂಟು ತಿಂಗಳಿಂದ ಪ್ರದರ್ಶನವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ಶೀಘ್ರವೇ ಸರಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಬಯಲಾಟ ಆರಂಭವಾಗಲಿದ್ದು, ಕಲಾವಿದರ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗುವುದು. ಸರಕಾರದ ಮಾರ್ಗಸೂಚಿಯಂತೆ ಕಲಾವಿದರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಕೊಳ್ಳತಕ್ಕದ್ದು. ಯಕ್ಷಗಾನ ವೀಕ್ಷಣೆಗೆ ೨೦೦ ಕ್ಕಿಂತ ಅಧಿಕ ಮಂದಿ ಸೇರಲು ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Post a comment