ಸುಳ್ಯ,ಅ.19 :ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ನಗರದಲ್ಲಿ ಇಂದು ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ಹಾಗು ಯುವತಿ ಬೆಳ್ತಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಆತ್ಮಹತ್ಯೆಗೆ ನಿಖರ ಕಾರಣಗಳು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Post a comment