ಬೆಂಗಳೂರು,ನ.3: ರಾಜ್ಯದಲ್ಲಿಯೂ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲಾಗುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಲಹಾಬಾದ್ ಹೈಕೋರ್ಟ್ ಆದೇಶದಂತೆ ಕರ್ನಾಟಕವೂ ವಿವಾಹದ ಸಲುವಾಗಿ ಧಾರ್ಮಿಕ ಮತಾಂತರಗೊಳ್ಳುವುದನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರುವುದು. ಜಿಹಾದಿಗಳು ನಮ್ಮ ಸೋದರಿಯರ ಘನತೆಗೆ ಕುಂದು ತಂದಾಗ ನಾವು ಮೌನವಾಗಿರುವುದಿಲ್ಲ.
ಮತಾಂತರ ಕೃತ್ಯದಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಮತ್ತು ತ್ವರಿತ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ" ಎಂದವರು ಟ್ವೀಟ್ ಮಾಡಿದ್ದಾರೆ.
Post a comment