ಬೆಳ್ತಂಗಡಿ, ನ. 3: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ರಾಡಿ ಅತ್ರಿಜಲು ಎಂಬಲ್ಲಿ ಕೃಷಿಕ ದಂಪತಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಚಿಂತಾಜನಕ ಸ್ಥಿತಿಯಲ್ಲಿದ್ದ ತಂದೆ ಮತ್ತು ಮಗು ಸಾವನ್ನಪ್ಪಿದ್ದಾರೆ.
ಅತ್ರಿಜಲು ನಿವಾಸಿ ಚಂದ್ರಶೇಖರ್ ಶೆಟ್ಟಿಗಾರ್ (37)ಮತ್ತು ಅವರ ಪತ್ನಿ ಆಶಾ (30) ಹಾಗೂ ಐದು ವರ್ಷದ ಮಗು ಸೋಮವಾರ ಸಂಜೆ ವೇಳೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೂವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ತಂದೆ ಮತ್ತು ಮಗು ಸಾವನ್ನಪ್ಪಿದ್ದಾರೆ.
Post a comment