ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಕಳದ ಹಿರಿಯ ವಕೀಲ ಬಿಜೆಪಿ ಮುಖಂಡ ಮಣಿರಾಜ್ ಶೆಟ್ಟಿ ಯವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಪ್ರಧಾನ ಕಾರ್ಯದರ್ಶಿ ನವೆಂಬರ್ 24 ರಂದು ಅಧಿಸೂಚನೆ ಹೊರಡಿಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಇವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮೂರು ಅವಧಿಗೆ ಕಾರ್ಕಳ ಬಿಜೆಪಿಯ ಕ್ಷೇತ್ರಾಧ್ಯಕ್ಷರಾಗಿದ್ದ ಇವರು ಕಾರ್ಕಳದಲ್ಲಿ ತಳಮಟ್ಟದಲ್ಲಿ ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Post a comment