ಸಾಣೂರು:ಕರ್ನಾಟಕ ಸರಕಾರ ರಾಷ್ಟ್ರೀಯ ಆರೋಗ್ಯ ಅಭಿಯಾನ,ಜಿಲ್ಲಾ ಪಂಚಾಯತ್ ಉಡುಪಿ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐ ಇ ಸಿ ವಿಭಾಗ,ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕಾರ್ಕಳ,ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಮತ್ತು ಕರ್ನಾಟಕ ಸಂಘ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯುವಕ ಮಂಡಲ (ರಿ.) ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಿಯ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮವು ಯುವಕ ಮಂಡಲದ ಸಭಾಂಗಣದಲ್ಲಿ ದಿ.22 ರವಿವಾರ ನಡೆಯಿತು.
ಮಂಡಲದ ಹಿರಿಯ ಸದಸ್ಯರಾದ ಶ್ರೀ ಶ್ಯಾಮ್ ಶೆಟ್ಟಿ ಸಾಣೂರು ಉದ್ಘಾಟಿಸಿ ಆರೋಗ್ಯವಂತ ವ್ಯಕ್ತಿಯೇ ಅತ್ಯಂತ ನೆಮ್ಮದಿಯಿಂದ ಇರಲು ಸಾಧ್ಯ ಎಂದರು.ಆರೋಗ್ಯ ಇಲಾಖೆಯ ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು.
ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ರಾಷ್ಟ್ರೀಯ ಆರೋಗ್ಯ ಇಲಾಖೆಯ ಸಂಪೂರ್ಣ ಮಾಹಿತಿ ನೀಡಿದರು ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಶಿವರಾಮ್ ರಾವ್ ಏನ್. ವಿ. ಸಿ ಯ ಮಾಹಿತಿ ನೀಡಿದರು ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಮಾಜಿ ಅಧ್ಯಕ್ಷರಾದ ಪ್ರಕಾಶ್ ಮಡಿವಾಳ ಉಪಸ್ಥಿತರಿದ್ದರು.ಕಾರ್ಯದರ್ಶಿ ಮೋಹನ್ ಶೆಟ್ಟಿ ನಿರೂಪಿಸಿದರು ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ ವಂದಿಸಿದರು.
ಜಾಹೀರಾತು
Post a comment