ಹೆಬ್ರಿ :ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ರಚಿಸಲಾದ ಉಡುಪಿ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ರಂಗನಟ ನಿರ್ದೇಶಕರಾದ ನಾಟಕ ಕಲಾವಿದರಾದ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಕಲಾವಿದರಾದ ಮುದ್ರಾಡಿ ನಮತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷರಾದ ಸುಕುಮಾರ್ ಮೋಹನ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ನೇಮಕ ಮಾಡಿದ್ದಾರೆ.
ನಾಡು ನುಡಿ ಕಲೆ ಸಾಹಿತ್ಯ ರಂಗಭೂಮಿ ಕ್ಷೇತ್ರದಲ್ಲಿ ಸುಕುಮಾರ್ ಮೋಹನ್ ಅಪಾರ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಸುಕುಮಾರ್ ಮೋಹನ್ ಸೇವೆ ಸಲ್ಲಿಸಿದ್ದಾರೆ.ಜಾಹೀರಾತು
Post a comment