ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 21ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಿದ "ತಿಂಗಳ ಸಂಭ್ರಮ" ಕಾರ್ಯಕ್ರಮದ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾ ಮಂಡಳಿಯಲ್ಲಿ ಕಳೆದ 30 ವರ್ಷಗಳಿಂದ ಯಕ್ಷಗಾನ ಪ್ರಮುಖ ಕಲಾವಿದರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ನಂದಳಿಕೆಯ ಅಬ್ಬನಡ್ಕದ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಬೋಳ ಉದಯ ಅಂಚನ್ ರವರ ಅಧ್ಯಕ್ಷತೆಯಲ್ಲಿ ಸನ್ಮಾನ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ಪೂಜಾರಿ, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ಸುರೇಶ್ ಪೂಜಾರಿ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಅಬ್ಬನಡ್ಕ ಲಿಯೋ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಜತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಕೋಶಾಧಿಕಾರಿ ವೀಣಾ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
Post a comment