ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ (02/12/2020) ಮಧ್ಯಾಹ್ನ 3:00 ಗಂಟೆಗೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಬ್ರಾಮರಿ ಜಂಕ್ಷನ್ ಬಳಿ ನಡೆದಿದೆ.
ಕಾರ್ಕಳ ಕಡೆಯಿಂದ ಪಡುಬಿದ್ರೆ ಗೆ ವೇಗವಾಗಿ ತೆರಳುತ್ತಿದ್ದ ಕಾರು ತೀರಾ ಬಲಭಾಗಕ್ಕೆ ಬಂದು ರಸ್ತೆ ಕ್ರಾಸ್ ಮಾಡುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಪ್ರಭಾಕರ ಕುಡ್ವರವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಈ ಅಪಘಾತದಿಂದ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ.
\
ಕೂಡಲೇ ಕಾರ್ಕಳ ಸರಕಾರಿ ಆಸ್ಪತ್ರೆ ಕರೆದುಕೊಂಡು ಹೋಗಿದ್ದು,ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ,ಎಂ,ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಜಾಹೀರಾತು
Post a comment