ಗೋಹತ್ಯೆ ನಿಷೇಧ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಗೋವಿಗೆ ಪೂಜೆ ನೆರವೇರಿಸಿದ ಸಿಎಂ-Times of karkala

ಗೋಹತ್ಯೆ ನಿಷೇಧ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಭ್ರಮ ವ್ಯಕ್ತಪಡಿಸಿದ್ದು, ಇಂದು ಗೋ ಪೂಜೆ ಮಾಡಿದ್ದಾರೆ.


ಕಾವೇರಿ ನಿವಾಸದಲ್ಲಿ ಸಿಎಂ ಅವರು ಗೋವಿಗೆ ಪೂಜೆ ನೆರವೇರಿಸಿದ್ದು, ಪೂಜೆಯಲ್ಲಿ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಮತ್ತಿರರು ಭಾಗಿಯಾಗಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೇಲ್ಮನೆಯಲ್ಲಿ ಗೋಹತ್ಯೆ ವಿಧೇಯಕ ಮಂಡನೆಯಾಗದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಗ್ರೀವಾಜ್ಞೆ ಮೂಲಕ ಕಾಯಿದೆ ಜಾರಿ ಮಾಡುತ್ತೇವೆ. ಮಂಗಳವಾರ ಒಂದು ದಿನದ ಅಧಿವೇಶನ ಕರೆಯಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಜೊತೆಯೂ ಚರ್ಚೆ ಮಾಡಿದ್ದೇವೆ ಎಂದು ಹೇಳುತ್ತಾ ನಿನ್ನೆ ಅಧಿವೇಶನ ಬೇಗ ಮುಕ್ತಾಯಗೊಳಿಸಿದ್ದಕ್ಕೆ ಬಿಎಸ್‍ವೈ ಅಸಮಾಧಾನ ವ್ಯಕ್ತಪಡಿಸಿದರು.

ಜಾಹೀರಾತು 

  



 








Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget