ಶಂಕಿತನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸಕ್ರ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್ಮೆಂಟ್ ಗೋಡೆಯ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ‘ಲಷ್ಕರ್ ಜಿಂದಾಬಾದ್’ ಎಂದು ಕಿಡಿಗೇಡಿಗಳು ಬರೆದಿದ್ದರು. ಕಾಂಪೌಂಡ್ ಮೇಲೆ ‘ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ತಾಲಿಬಾನ್ ಆ?ಯಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್ ವಿತ್ ಸಂಘೀಸ್ ಆ್ಯಂಡ್ ಮನ್ವೇದಿಸ್’ ಎಂದು ಇಂಗ್ಲೀಷ್ನಲ್ಲಿ ಬರೆಯಲಾಗಿತ್ತು. ಅಂದರೆ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದಾಗಿತ್ತು. ಈ ಮೂಲಕ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ ಹಾಕಿದ್ದರು. ಈ ವಿಚಾರ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು.
ಈ ಸಂಬಂಧ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದ ವೇಲೇ ಬೈಕಿನಲ್ಲಿ ಬಂದು ಗೋಡೆಯಲ್ಲಿ ಬರೆದು ಪರಾರಿಯಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ಖಚಿತ ಮೊಬೈಲ್ ಲೊಕೇಶನ್ ಅಧರಿಸಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಉಳಿದವರ ಪತ್ತೆಗೆ ಬಲೆ ಬೀಸಿದ್ದಾರೆ.
ಜಾಹೀರಾತು
Post a comment