ಗ್ರಾಮ ಪಂಚಾಯತ್ ಚುನಾವಣೆ ಪೂರ್ವಭಾವಿಯಾಗಿ ಬಿಜೆಪಿ ಯುವ ಮೋರ್ಚಾ ಕಾರ್ಕಳದ ಸಭೆ ಶಾಸಕರ ಕಚೇರಿಯಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯವೈಖರಿಯ ಕುರಿತು ಹಾಗೂ ಸಕ್ರಿಯರಾಗಿ ಚುನಾವಣೆಯನ್ನು ಎದುರಿಸಿ 34ಕ್ಕೆ 34 ಗ್ರಾಮಪಂಚಾಯಿತಿಗಳನ್ನು ತಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಯುವ ಮೋರ್ಚಾದ ಪಾತ್ರ ಮಹತ್ವದ್ದೆಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.
ಕಾರ್ಕಳ ಯುವ ಮೋರ್ಚಾ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಭೆಯಲ್ಲಿ ಬಿಜೆಪಿ ಕ್ಷೇತ್ರಧ್ಯಕ್ಷರಾದ ಮಹಾವೀರ ಹೆಗಡೆ,ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಭಾರಿ ರವೀಂದ್ರ ಮಡಿವಾಳ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಜೈನ್, ಪ್ರಭಾರಿ ಕರುಣಾಕರ ಕೋಟ್ಯಾನ್ ಉಪಸ್ಥಿತರಿದ್ದರು
ಜಾಹೀರಾತು
Post a comment