ರೋಟರಿ ಆನ್ಸ್ ಕ್ಲಬ್ ಮತ್ತು ಯುವವಾಹಿನಿ ಘಟಕ ಕಾರ್ಕಳ ಇವರ ನೇತೃತ್ವದಲ್ಲಿ ನಡೆಯುತ್ತಿರುವಂತಹ ಕರುಣಾಳು ಬಾ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ಕಾರ್ಕಳ ಪರಿಸರದ 21ನೇ ಮನೆಗೆ ಸೋಲಾರ್ ಘಟಕದ ವ್ಯವಸ್ಥೆಯನ್ನು ಮಾಡಲಾಯಿತು.
ಕಾರ್ಯಕ್ರಮದ ಪ್ರಾಯೋಜಕರು ಆಗಿರುವ ತಾಲೂಕು ಬಂಟ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಶೆಟ್ಟಿಯವರು ಸೋಲಾರ್ ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಬಂಟ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಸುನೀತಾ ಮತ್ತು ಯುವವಾಹಿನಿ ಅಧ್ಯಕ್ಷ ಗಣೇಶ್ ಸಾಲಿಯಾನ್, ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, 3ನೇ ವಾರ್ಡ್ ಸದ್ಭವನ ನಗರದ ಕೌನ್ಸಿಲರ್ ನೀತಾ ಮತ್ತು ಸುರೇಂದ್ರ, ಅಶೋಕ್ ಸುವರ್ಣ, ಯುವವಾಹಿನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
Post a comment