ಬ್ರೇಕಿಂಗ್ ನ್ಯೂಸ್: ರಂಗಸ್ಥಳದಲ್ಲೇ ಯಕ್ಷಗಾನ ವೇಷಧಾರಿ ಸಾವು-Times of karkala

ರಂಗಸ್ಥಳದಲ್ಲೇ ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಮೃತಪಟ್ಟ ಕಲಾವಿದ.ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು.

ಅನಂತರ ತತ್‍ಕ್ಷಣ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಮತ್ತು ಸಹಕಲಾವಿದರು, ಸ್ಥಳೀಯರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ಆಸ್ಪತ್ರೆ ತಲುಪುವಾಗ ಮೃತಪಟ್ಟಿದ್ದಾರೆ.







ಜಾಹೀರಾತು 

  



 




Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget