ಶಿಕ್ಷಣ ಇಲಾಖೆ ಕಾರ್ಕಳ ಹಾಗೂ ರೋಟರಿ ಆನ್ಸ್ ಕ್ಲಬ್ ನ ಸಹಯೋಗದೊಂದಿಗೆ ವಿದ್ಯಗಮನ ಪ್ರಯುಕ್ತ ಶಾಲಾಮಕ್ಕಳಿಗೆ ಕೋರೋನಾ ಜಾಗೃತಿ ಮತ್ತು ಮಾಹಿತಿ ಹೊಂದಿರುವ ಕರಪತ್ರಗಳನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು.
ಆನ್ಲೈನ್ ಮೂಲಕ ಎಲ್ಲಾ ಶಾಲೆಗಳಿಗೆ ಕೋರೋನ ತಡೆಗಟ್ಟುವ ಮಾಹಿತಿಯನ್ನು ರೋ. ರಮಿತ ಶೈಲೇಂದ್ರ ರಾವ್ ನೀಡಿದರು.
ನಂತರ ತಾಲೂಕಿನ 21 ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಅಧಿಕಾರಿ ಶಶಿಧರ್ ಅವರು ಈ ರೀತಿಯ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಆರೋಗ್ಯ ಕಾಪಾಡಿಕೊಳ್ಳಲು ಈ ಎಲ್ಲಾ ಮಾಹಿತಿ ಅಗತ್ಯ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಬಾಲಕೃಷ್ಣ ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಜಾಹೀರಾತು
Post a comment