ಕಾರ್ಕಳ:"ಸಮರ್ಪಕ ಮರಳು ನೀತಿ ಜಾರಿಗೆ ಉನ್ನತ ಮಟ್ಟದ ಸಭೆ"-ಸಚಿವ ಸಿ.ಸಿ ಪಾಟೀಲ್-Times of karkala

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ‌ ಜ್ವಲಂತ ಸಮಸ್ಯೆಯಾಗಿರುವ ಮರಳಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾಳೆ ಮಂಗಳೂರಿನಲ್ಲಿ ಗಣಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು, ಶಾಸಕರೊಂದಿಗೆ ಜತೆಗೆ ಸಭೆ ನಡೆಸಲಾಗುವುದೆಂದು ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ಸಚಿವರಾದ ಸಿ.ಸಿ ಪಾಟೀಲ್ ಹೇಳಿದ್ದಾರೆ.

ಅವರು ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರು ಹಾಗೂ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಈಗಾಗಲೇ ಸಿಆರ್ ಝಡ್ ವ್ಯಾಪ್ತಿಯಲ್ಲಿನ‌ ಮರಳಿನ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಆದರೆ ಒಳನಾಡು ನಾನ್ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಒಂದಷ್ಟು ತಾಂತ್ರಿಕ ಹಾಗೂ ಕಾನೂನಾತ್ಮಕ ಸಮಸ್ಯೆಯಿದೆ, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗಣಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ,ಸಚಿವರು ಹಾಗೂ ಶಾಸಕರ ನೇತ್ರತ್ವದಲ್ಲಿ ಸಭೆ ಕರೆಯಲಾಗಿದೆ ಎಂದರು.ಮರಳಿನ ಸಮಸ್ಯೆಯಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಜಾಹೀರಾತು 







  



 




Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget