ಹೆಬ್ರಿ : ಹೆಬ್ರಿಯ ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಯುವ ವೃಂದದ ವತಿಯಿಂದ ಇತ್ತೀಚೆಗೆ ನೆಹರು ಯುವ ಕೇಂದ್ರ ಉಡುಪಿ ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಕಾರದಲ್ಲಿ ಜಲಪ್ರತಿಜ್ಞೆ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಗಣಪತಿ ಹೆಚ್ ಎ. ನೀರಿನ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಶೆಟ್ಟಿ ಜಲ ಪ್ರತಿಜ್ಞೆ ಬೋಧಿಸಿದರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿಘ್ನೇಶ್ವರ, ಶಾಂತಿನಿಕೇತನ ಯುವ ವೃಂದದ ಅಧ್ಯಕ್ಷ ರಾಜೇಶ್ ನಾಯ್ಕ್ , ಜಯಕರ್, ರೇಷ್ಮಾ, ದಿಕ್ಷಿತ್ ನಾಯಕ್, ನಾಗರಾಜ್ ಇದ್ದರು.
ಜಾಹೀರಾತು
Post a comment