ಕಾರ್ಕಳ:ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ವು ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗರವರು ಮಾತನಾಡಿ ಮಹಾತ್ಮ ಗಾಂಧಿಯವರು ಸತ್ಯ ಅಹಿಂಸೆಯ ಪರಿಪಾಲಕರಾಗಿ ಪ್ರತಿಪಾದಕರಾಗಿ ಹಾಗು ಪ್ರವರ್ತಕರಾಗಿ ಅವರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ ಎಂದು ನೆನಪಿಸಿಕೊಂಡರು.
ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಸುಶಾಂತ್ ಸುಧಾಕರ್ ರವರು ಮಾತನಾಡಿ ಭಾರತದ ಅನಭಿಷಿಕ್ತ ಚಕ್ರವರ್ತಿಯಾಗಿದ್ದರೂ ಅರೆನಗ್ನ ಫಕೀರನಂತೆ ಸರಳ ಸಜ್ಜನಿಕೆಯ ಜೀವನ ನಡೆಸಿ ನೈತಿಕ ಕ್ರಾಂತಿಕಾರಿ ಹಾಗು ಸಮಾಜ ಸುಧಾರಕರಾಗಿ ಮಾನವೀಯ ಮೌಲ್ಯಗಳನ್ನು ಮತ್ತು ಭಾರತದ ಔನ್ನತ್ಯವನ್ನು ವಿಶ್ವಕ್ಕೆ ಪಸರಿಸಿದ ಮಹಾತ್ಮ ಎಂದು ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಕೋಟ್ಯಾನ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರ ಜಾರ್ಜ್ ಕ್ಯಾಸ್ಟಲಿನೊ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮ್ಮದ್ ಅಸ್ಲಾಂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಆರಿಫ್ ಕಲ್ಲೋಟ್ಟೆ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕಾಂತಿ ಶೆಟ್ಟಿ ಮಾಜಿ ಪುರಸಭಾ ಅಧ್ಯಕ್ಷರಾದ ಸುದೀಪ್ ಎನ್ ಆರ್ ಪುರಸಭಾ ಸದಸ್ಯರಾದ ಶುಭದ ರಾವ್, ವಿನ್ನಿ ಬೊಲ್ಟ್ ಮೆಂಡೋನ್ಸಾ, ಸೋಮನಾಥ್ ನಾಯ್ಕ್, ಮಾಜಿ ಪುರಸಭಾ ಸದಸ್ಯರಾದ ವಿವೇಕಾನಂದ ಶೆಣೈ, ಸುನಿಲ್ ಕುಮಾರ್ ಭಂಡಾರಿ ಶೋಭಾ ಅಂಬಾಪ್ರಸಾದ್ ಐ.ಟಿ ಸೆಲ್ ಅಧ್ಯಕ್ಷರಾದ ಸತೀಶ್ ಕಾರ್ಕಳ ಉಪಸ್ಥಿತರಿದ್ದರು.
ಜಾಹೀರಾತು
Post a comment