ಅಮೆರಿಕದಲ್ಲಿ ದುಡಿದು ಲಕ್ಷ ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಈಗ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ-Times of karkala

ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿರುವ ಉದ್ಯೋಗಿ ಸ್ವಾತಿ ತಿಪ್ಪೇಸ್ವಾಮಿ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷೆಯಾಗಿದ್ದಾರೆ.

ಮಾಹಿತಿ ತಂತ್ರಜ್ಞಾನದಲ್ಲಿ ಬಿಇ ಪದವೀಧರೆಯಾಗಿರುವ ಸ್ವಾತಿ, ಬೆಂಗಳೂರು ನಗರದಲ್ಲಿ ವಾಸವಾಗಿದ್ದರು. ಅಲ್ಲದೆ ಅಮೆರಿಕದಲ್ಲಿ ಐದು ವರ್ಷ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‍ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಮಾಜ ಸೇವೆ ಮಾಡುವ ತುಡಿತದೊಂದಿಗೆ ವಿದೇಶದಲ್ಲಿನ ಲಕ್ಷ ಲಕ್ಷ ಸಂಬಳ ಬರುವ ಹುದ್ದೆ ತೊರೆದು ತಮ್ಮ ಸ್ವಗ್ರಾಮ ಸೊಕ್ಕೆಗೆ ಹಿಂದಿರುಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಸ್ವಾತಿಯವರು ಅಮೆರಿಕದಲ್ಲಿ ಸಾಫ್ಟ್‍ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದರು. ತಂದೆಯನ್ನು ಹಾಗೂ ಗ್ರಾಮವನ್ನು ನೋಡಲು ಪ್ರತಿ ವರ್ಷ ರಜೆ ಹಾಕಿ ಗ್ರಾಮಕ್ಕೆ ಬರುತ್ತಿದ್ದರು. ಅದರಲ್ಲೂ ಜಗಳೂರು ತಾಲೂಕು ಎಂದರೆ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಒಂದು. ಸರಿಯಾಗಿ ಮಳೆ ಬೆಳೆ ಇಲ್ಲದೆ ಇಲ್ಲಿನ ಬಡ ಜನರಿಗೆ ಸರಿಯಾಗಿ ಉದ್ಯೋಗ ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಹಳ್ಳಿಗಾಡಿನಲ್ಲಿ ಮೂಲ ಸೌಲಭ್ಯಗಳ ಕೊರತೆಯನ್ನು ಕಣ್ಣಾರೆ ಕಂಡಿದ್ದರು. ಹೀಗಾಗಿ ಹಳ್ಳಿಗಳಲ್ಲೂ ಕನಿಷ್ಠ ಪ್ರಾಥಮಿಕ ಸೌಕರ್ಯಗಳನ್ನು ಕಲ್ಪಿಸುವ, ಹಳ್ಳಿಗಾಡಿನ ಜನರ ಜೀವನಮಟ್ಟವನ್ನು ಸುಧಾರಿಸುವ ಕನಸನ್ನು ಸ್ವಾತಿ ತಿಪ್ಪೇಸ್ವಾಮಿ ಕಂಡಿದ್ದರು.

ಗ್ರಾಮ ಪಂಚಾಯಿತಿಯಲ್ಲಿರುವ ಸೌಲಭ್ಯಗಳನ್ನು ಬಡವರಿಗೆ ದೊರಕುವಂತೆ ಮಾಡಿದರೆ ಸಾಕು, ಅಭಿವೃದ್ಧಿ ಸಾಧ್ಯ ಎನ್ನುವ ಧ್ಯೇಯವನ್ನು ಇಟ್ಟುಕೊಂಡಿದ್ದ ಸ್ವಾತಿಯವರು, ಪಂಚಾಯಿತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣೆಗೂ ಸ್ಪರ್ಧಿಸಿದರು. ಉನ್ನತ ಶಿಕ್ಷಣ ಪಡೆದ ಸ್ವಾತಿ, ತಾಲೂಕಿನಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಸೊಕ್ಕೆ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು. ಹೀಗಾಗಿ ವಿದ್ಯಾವಂತೆಯಾಗಿರುವ ಸ್ವಾತಿ ತಿಪ್ಪೇಸ್ವಾಮಿ ಅವರು ಅಧ್ಯಕ್ಷೆಯಾಗಿ ಸಹ ಆಯ್ಕೆಯಾಗಿದ್ದಾರೆ.ಜಾಹೀರಾತು 
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget