ಮೂಡುಬಿದಿರೆ:ಕಾಂಗ್ರೆಸ್ ಬೆಲೆಯೇರಿಕೆ ವಿರುದ್ದದ ಪ್ರತಿಭಟನೆಯಲ್ಲಿ ನಳಿನ್ ಕುಮಾರ್ ಕಟೀಲ್,ಸ್ಮೃತಿ ಇರಾನಿ-Times of karkala

ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಇದರ ಆಶ್ರಯದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು  ಮಿಥುನ್ ರೈ ಅವರ ನೇತೃತ್ವದಲ್ಲಿ ದಿನಾಂಕ 19.2.2021 ರಂದು ನಡೆಯುವ ಪ್ರತಿಭಟನೆಯ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಬಿಜೆಪಿಗರು ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೀಡಾಗುವಂತಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ವಿಪಕ್ಷದಲ್ಲಿದ್ದ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸಂದರ್ಭದಲ್ಲಿ ನಡೆಸಿದ ಹೋರಾಟದ ಫೋಟೋಗಳು ಕಾಂಗ್ರೆಸ್ ನ ಪೋಸ್ಟರ್ಗಳಲ್ಲಿ ಕಾಣಿಸಿಕೊಂಡಿದ್ದು ಸದ್ಯ ಬಿಜೆಪಿಗರಿಗೆ ನಗೆಪಾಟಲಿಗೀಡಾಗುವಂತಾಗಿದೆ.


ಒಟ್ಟಾರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಪೋಸ್ಟರ್ ಗಳು ಒಂದು ರೀತಿಯ ಸಂಚಲನವನ್ನು ಸೃಷ್ಟಿ ಮಾಡಿದ್ದು ಜನ ನಾಳೆಯ ವಿಭಿನ್ನ ರೀತಿಯ ಪ್ರತಿಭಟನೆಯ ಬಗ್ಗೆ ಕುತೂಹಲದಿಂದ ಕಾಯುವಂತಾಗಿದೆ.
 

 ಜಾಹೀರಾತು 

 

 

 

 

 

 

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget