ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಆರೋಪಿಯನ್ನು ಕೊಲೆ ಮಾಡಲು ಯತ್ನಿಸಿರುವ ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಸೆಕೆಂಡ್ ಬ್ಲಾಕ್ ಬಳಿ ಘಟನೆ ನಡೆದಿದ್ದು, ಕೊಲೆಯ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ದಾಳಿ ನಡೆಸಲಾಗಿದೆ.
ಈ ವೇಳೆ ಪಿಂಕಿ ನವಾಜ್ ಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಬಂದ ಆರು ಜನರ ತಂಡ ಪಿಂಕಿ ನವಾಜ್ ಮೇಲೆ ದಾಳಿ ನಡೆಸಿದೆ.
ಜಾಹೀರಾತು
Post a comment