ಮೂಡುಬಿದಿರೆ:ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಮುಖಂಡ ಜಗದೀಶ್‌ ಅಧಿಕಾರಿ ಜಗದೀಶ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು ಬಿಲ್ಲವ ಸಮುದಾಯದ ವಿರುದ್ಧ ಮಾತನಾಡಿದ ಆಡಿಯೋ ವೈರಲ್ ಆಡಿಯೋ+ಸುದ್ದಿಗಾಗಿ ಲಿಂಕ್ ಕ್ಲಿಕ್ ಮಾಡಿ-Times of karkala

 ಮೂಡುಬಿದಿರೆ:ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಮುಖಂಡ ಜಗದೀಶ್‌ ಅಧಿಕಾರಿ


ಜಗದೀಶ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು 


ಬಿಲ್ಲವ ಸಮುದಾಯದ ವಿರುದ್ಧ ಮಾತನಾಡಿದ ಆಡಿಯೋ ವೈರಲ್ 


ಆಡಿಯೋ+ಸುದ್ದಿಗಾಗಿ ಲಿಂಕ್ ಕ್ಲಿಕ್ ಮಾಡಿ-Times of karkala


ವಾಲ್ಪಾಡಿಗುತ್ತುವಿನಲ್ಲಿ ನಡೆದ ನೇಮೋತ್ಸವದ ಧಾರ್ಮಿಕ ಸಭೆಯಲ್ಲಿ ಭಾಷಣ ಮಾಡುವ ವೇಳೆ, ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಜಗದೀಶ್‌ ಅಧಿಕಾರಿಯವರ ಮಾತುಗಳ ಆಡಿಯೋ ವೈರಲ್‌ ಆಗಿದೆ. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಆದರೆ ಮಾತಿನ ನಂತರ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್‌ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್‌ನಲ್ಲಿ ರೆಕಾರ್ಡ್‌ ಆಗಿದೆ. ತನ್ನೊಂದಿಗೆ ಇದ್ದವರೊಂದಿಗೆ ಮಾತನಾಡಿರುವ ಅಡಿಯೋ ದಾಖಲೆಯಲ್ಲಿ, ಬಿಲ್ಲವ ಸಮುದಾಯ ವಿರುದ್ಧ ಮಾತನಾಡಿರುವುದು, ಕೋಟಿ ಚೆನ್ನಯರ ಕಥೆಯನ್ನು ಅನ್ಯ ರೀತಿಯಲ್ಲಿ ಹೇಳಿರುವುದರಿಂದ ಬಿಲ್ಲವ ಸಮುದಾಯದವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ತುಳುನಾಡಿನ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಹಿರಿಯ ರಾಜಕಾರಣಿ ಬಿಲ್ಲವ ಮುಖಂಡ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಜಗದೀಶ್‌ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬಿಲ್ಲವ ಸಂಘದ ವಿವಿಧ ಘಟಕಗಳ ಮುಖಂಡರು ಶುಕ್ರವಾರ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಿಲ್ಲವ ಸಂಘದ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ, ಸಂಘದ ಪದಾಧಿಕಾರಿಗಳು, ಬಿಲ್ಲವ ಸಂಘದ ಮಹಿಳಾ ಘಟಕ, ಸೇವಾದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು 












Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget