ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳ ಇದರ ಪೂರ್ವ ವಿದ್ಯಾರ್ಥಿ ಸಂಘದ ವಾರ್ಷಿಕ ಕ್ರೀಡಾ ಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ಫೆ.14 ರಂದು ಜರಗಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶ್ರೀವರ್ಮ ಅಜ್ರಿ ಎಂ ರವರು ಕ್ರೀಡಾ ಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭ ದಲ್ಲಿ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಎಲ್ ಜನ್ನೆ , ಶ್ರೀ ಮಂಜುನಾಥ ಬಿ. ಹಾಗೂ ಶ್ರೀ ನವೀನ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಈಶ್ವರ್ ಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ರೀಡಾ ಕೂಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಪೂರ್ವ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.
ಜಾಹೀರಾತು
Post a comment