ಕಲ್ಯಾ:ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಯುವಕನೋರ್ವ ನಾಡಕೋವಿಯಿಂದ ತನಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ .ಮೃತ ಯುವಕನನ್ನು ವಿಶಾಕ್ ಪೂಜಾರಿ (30) ಎಂದು ಗುರುತಿಸಲಾಗಿದೆ.
ಮೃತ ಯುವಕ ವಿವಾಹಿತನಾಗಿದ್ದು 1ಹೆಣ್ಣು ಮಗುವನ್ನು ಹೊಂದಿದ್ದಾರೆ.ಇಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ನಂತರ ಪತ್ತೆಯಾಗಲಿಲ್ಲ ,ಕಂಗಾಲಾದ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಕೊನೆಯಲ್ಲಿ ಮೃತದೇಹ ಪತ್ತೆಯಾಗಿದೆ .
ಸ್ಥಳಕ್ಕೆ ಕಾರ್ಕಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .
ಜಾಹೀರಾತು
Post a comment