ಕಾರ್ಕಳ:ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕು ಕೆದಿಂಜೆ ಗ್ರಾಮದಲ್ಲಿ ನಡೆದಿದೆ.
ಕಾರ್ಕಳ: ಮಾರ್ಚ್ 02 ರಂದು 8 ಗಂಟೆಗೆ ಕಾರ್ಕಳ ತಾಲೂಕು ಕೆದಿಂಜೆ ಗ್ರಾಮದ ಕೆದಿಂಜೆ ಬಿ,ಎಸ್,ಕೆ ಕ್ಯಾಶ್ಯೂ ಫ್ಯಾಕ್ಟರಿಯ ಎದುರು ಹಾದುಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೆಳ್ಮಣ್ ಕಡೆಯಿಂದ ನಿಟ್ಟೆ ಕಡೆಗೆ ಕೆ,ಎ20-ಇ,ವಿ-8952 ನೇ ನೋಂದಣಿಯ ಬೈಕ್ ನಲ್ಲಿ ಅದರ ಸವಾರ ಅತೀವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಭಾಗಕ್ಕೆ ಚಲಾಯಿಸಿಕೊಂಡು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಕೀಲ್ ರಾಂ ಎಂಬುವವರಿಗೆ ಡಿಕ್ಕಿಹೊಡೆದಿದೆ.
ವಕೀಲ್ ರಾಂ ರವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
Post a comment