ಸಾಣೂರು:ಸಿ.ಕೆ. ನಾರಾಯಣ ಅವರಿಗೆ ಬೀಳ್ಕೊಡುಗೆ ಸಮಾರಂಭ-Times of karkala

ನೆಹರು ಯುವ ಕೇಂದ್ರ ಸಂಘಟನೆಯಲ್ಲಿ ರಾಜ್ಯದ ವಿವಿಧ ಕಡೆ ಕಳೆದ 32 ವರ್ಷದಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ಸಿ.ಕೆ. ನಾರಾಯಣ ಅವರ ಬೀಳ್ಕೊಡುಗೆ ಸಮಾರಂಭವು ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಕಚೇರಿಯಲ್ಲಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ ಭಾಗವಹಿಸಿ ನಿವೃತ್ತರಿಗೆ ಶುಭ ಹಾರೈಸಿ ಗೌರವ ಸ್ಮರಣಿಕೆ ನೀಡಿ ಅಭಿನಂಧಿಸಿದರು.

ಈ ಸಂಧರ್ಭದಲ್ಲಿ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಮಾಜಿ ಅಧ್ಯಕ್ಷರುಗಳಾದ ದೇವಾನಂದ್ ಶೆಟ್ಟಿ, ಜಗದೀಶ್ ಕುಮಾರ್,ಪ್ರಕಾಶ್ ಮಡಿವಾಳ ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಶ್ರೀ ವಿಲ್ಲ್ ಪ್ರೆಡ್ ಡಿ. ಸೋಜಾ ಅಧ್ಯಕ್ಷತೆ ವಹಿಸಿದ್ದರು ನೆಹರು ಯುವ ಕೇಂದ್ರ ಸಂಘಟನೆಯ ಉಭಯ ಜಿಲ್ಲಾ ಲೆಕ್ಕಧಿಕಾರಿ ಶ್ರೀ ವಿಷ್ಣುಮೂರ್ತಿ ಕಾರ್ಯಕ್ರಮ ಸಂಯೋಜಿಸಿದ್ದರು.

 ಜಾಹೀರಾತು 



 




 

 

Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget