ಕಾರ್ಕಳ:ವಿಶ್ವ ಆರೋಗ್ಯ ದಿನಾಚರಣೆ-Times of karkala

ಜಿಲ್ಲಾ ಪಂಚಾಯತ್ ಉಡುಪಿ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ರೋಟರಿ ಆನ್ಸ್ ಕ್ಲಬ್ ಕಾರ್ಕಳ  ಮತ್ತು ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಪಾಲಿಟೆಕ್ನಿಕ್ ರೆಡ್ ಕ್ರಾಸ್ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಕಾರ್ಕಳ ಇಲ್ಲಿ ವಿಶ್ವ ಆರೋಗ್ಯ ದಿನಾಚರಣೆ 2021 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರೋಟರಿ ಅನ್ಸ್  ಕ್ಲಬ್ ಕಾರ್ಕಳ ಇದರ ಅಧ್ಯಕ್ಷೆ ಶ್ರೀಮತಿ ರೋ.ರಮಿತಾ ಶೈಲೆಂದ್ರ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಈ ಬಾರಿಯ ವಿಶ್ವ ಆರೋಗ್ಯ ದಿನವನ್ನು ನಾವೆಲ್ಲರೂ ಒಟ್ಟಾಗಿ ಕೂಡಿ ಸೋಂಕು ಮುಕ್ತ  ಮಾಡುವ ನಿಟ್ಟಿನಲ್ಲಿ ಗಮನ ಹರಿಸಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸವನ್ನು ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಅವರು ಸಾರ್ವಜನಿಕ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ 1948 ರ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆಗೊಂಡು ಪ್ರತಿವರ್ಷ ಏಪ್ರಿಲ್ 7ರಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಸುಂದರವಾದ ಆರೋಗ್ಯಕರ ಜಗತ್ತನ್ನು ನಿರ್ಮಿಸುವುದು,  ಈ ಧ್ಯೇಯ ವಾಕ್ಯವು ಜಗತ್ತನ್ನು ಕಾಡುವ ಕೋವಿಡ್-19 ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ. ಕೊರೋನಾ ನಿಯಂತ್ರಣದ ಬಗ್ಗೆ ಸಮಾಜದ ಪ್ರತಿಯೊಬ್ಬರು ತಪ್ಪದೇ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸುರಕ್ಷಿತ ಸಮತೋಲಿತ. ಮನೆಯಲ್ಲಿಯೇ ತಯಾರಿಸಿದ ಆಹಾರ ಕಾಲಘಟ್ಟದಲ್ಲಿ ಅತ್ಯಂತ ಉಪಯುಕ್ತವಾಗಿದೆ. ರೋಗವಾಹಕ ಆಶ್ರಿತ ರೋಗಗಳಿಗೆ ಸಂಬಂಧಿತ,  ಮಲೇರಿಯಾ ಮತ್ತು ಡೆಂಗ್ಯೂ ಚಿಕನಗುನ್ಯಾ, ಪಯಲೇರಿಯ ಮತ್ತು ಮೆದುಳು ಜ್ವರ ನಿಯಂತ್ರಣದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಹಂತದಲ್ಲಿ ನಾಶಪಡಿಸಿ ಸಾಂಕ್ರಾಮಿಕ ರೋಗ ತಡೆಯಬಹುದು. ಅಸಾಂಕ್ರಾಮಿಕ ರೋಗಗಳ ಪೈಕಿ ಮಧುಮೇಹ, ರಕ್ತದೊತ್ತಡ ನಿಯಂತ್ರಣದಲ್ಲಿ ಯೋಗ ,ಧ್ಯಾನ ,ದೈಹಿಕ ವ್ಯಾಯಾಮಗಳು ಅನುಷ್ಠಾನಗಳು ಹೇಗೆ ಸಹಕಾರಿ ಎಂದು ವಿವರಿಸಿ ಪ್ರತಿಯೊಬ್ಬರು ರೋಗ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಆರೋಗ್ಯವಂತ ಸಮಾಜ ನಿರ್ಮಿಸಲು ಸಹಕಾರಿ ಎಂದು ವಿವರವಾಗಿ ಮಾಹಿತಿ ನೀಡಿದರು.

ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶ್ರೀಮತಿ ವಿಜಯ ಬಾಯಿ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ  ಮೋನಪ್ಪ ಹೆಚ್ ಇವರು ಮಾತನಾಡುತ್ತಾ ಆರೋಗ್ಯ ರಕ್ಷಣೆಯ ಬಗ್ಗೆ ಎಲ್ಲರೂ ಜಾಗೃತರಾಗೋಣ ಸುಂದರ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪಣ ತೊಡೋಣ ಎಂದು ಕರೆನೀಡಿದರು. 


ತಾಲೂಕಿನ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಶಿಧರ್ ಎಚ್ ಅವರು ಸಭಾ ಕಾರ್ಯಕ್ರಮ ನಿರ್ವಹಿಸಿದರು, ಹಿರಿಯ ಆರೋಗ್ಯ ಸಹಾಯಕ  ಬಿ ಶಿವರಾಮರಾವ್ ಕಾಲೇಜಿನ ಉಪನ್ಯಾಸಕ ಹರೀಶ್  ವಂದನಾರ್ಪಣೆ ಸಲ್ಲಿಸಿದರು.

 ಜಾಹೀರಾತು  
 

 Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget