ಕಾಂತಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ-Times of karkala

ಕಾಂತಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂತಾವರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು.



‌ಕಾಂತಾವರ ಮಹೇಶ್ ದೇವಾಡಿಗರ ನಿವಾಸದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸಿಗರಾದ ಸಂಜೀವ ಕೋಟ್ಯಾನ್ ಒಡ್ಡೊಟ್ಟು ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿ ಅಂಬೇಡ್ಕರ್ ಅವರ ಸಾಧನೆಗಳನ್ನು ವಿವರಿಸಿ ಇಂದು ಜನ ಸಾಮಾನ್ಯನು ಸ್ವಾಭಿಮಾನದಿಂದ ಜೀವನ ನಡೆಸಲು ಅಂಬೇಡ್ಕರ್ ಅವರ ಕೊಡುಗೆ ಮಹತ್ತರವಾದುದು, ಅಂಬೇಡ್ಕರ್ ಅವರು ನವ ಭಾರತದ ಶಿಲ್ಲಿ ಅವರನ್ನು ನೆನೆಯುವುದು ನಮ್ಮ ಆದ್ಯ ಕರ್ತವ್ಯ ಎಂದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಸಮಿತಿ ಅಧ್ಯಕ್ಷರೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್ ಅಡ್ಯಂತಾಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾ ಮೂಲ್ಯ, ಭೋಜ ಪೂಜಾರಿ, ಸರಿತಾ ನಾಯಕ್, ಜಯಕರ ಕೋಟ್ಯಾನ್, ಮಹೇಶ್ ದೇವಾಡಿಗ, ಹರೀಶ್ ದೇವಾಡಿಗ, ಶ್ರೀಧರ್, ಅಮಿತ್ ಪೂಜಾರಿ ಚಾವಂಡಿಗೋಳಿ, ಶಾಶ್ವತ್ ಶೆಟ್ಟಿ, ದಿನೇಶ್ ದೇವಾಡಿಗ, ಭಾಸ್ಕರ ನಾಯ್ಕ, ಧೀರಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಕಳ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

 ಜಾಹೀರಾತು 





 




 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget