ಪೊಲೀಸ್ ಠಾಣೆಯಲ್ಲಿಯೇ ಬತ್೯ಡೇ ಪಾರ್ಟಿ,ಪಡುಬಿದ್ರಿ ಠಾಣಾ ಎಸೈ ಸೇರಿ 10 ಸಿಬ್ಬಂದಿಗೆ ಕೊರೊನಾ ದೃಢ,ಪೊಲೀಸ್ ಠಾಣೆ 24 ಗಂಟೆಗಳ ಕಾಲ ಸೀಲ್ಡೌನ್ -Times of karkala

ಪಡುಬಿದ್ರಿ ಠಾಣೆಯ ಠಾಣಾಧಿಕಾರಿ ಸಹಿತ 10 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.



ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣಾಧಿಕಾರಿ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಅಂಟಿಕೊಂಡಿದ್ದು, ಸದ್ಯ ಅವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದಾರೆ. ಈ ಹಿನ್ನೆಲೆ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ಡೌನ್ ಮಾಡಿ ಠಾಣೆಯನ್ನು ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.

 ಸಿಬ್ಬಂದಿಯೊಬ್ಬರಿಗೆ ಜ್ವರ ಬಂದ ಹಿನ್ನೆಲೆಯಲ್ಲಿ  ಕೊವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಸಂದರ್ಭ ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಡಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಟೇಷನ್ ನಲ್ಲಿ ನಡೆದ ಸಿಬ್ಬಂದಿಯೋರ್ವರ  ಬತ್೯ಡೇ ಪಾರ್ಟಿಯಲ್ಲಿ ಅನಾರೋಗ್ಯದ ಸಿಬ್ಬಂದಿಯೋರ್ವರಿಂದ ಈ ಕೊರೊನ ಬಂದಿದೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕರಿಗೆ ಸಾಮಾಜಿಕ ಅಂತರದ ಬಗ್ಗೆ ಹೇಳುವ ಪೋಲೀಸರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

 ಜಾಹೀರಾತು  

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget