ನೂತನ ಮಾರ್ಗ ಸೂಚಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಏನಿರುತ್ತೆ ಏನಿರಲ್ಲ?ಜಿಲ್ಲಾಧಿಕಾರಿ ಹೇಳಿದ್ದೇನು..?ಇಲ್ಲಿದೆ ಸಮಗ್ರ ಮಾಹಿತಿ-Times of karkala

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸುವ ಸಲುವಾಗಿ ಪರಿಷ್ಕೃತ ಮಾರ್ಗ ಸೂಚಿಯನ್ನು ಸರಕಾರ ಜಾರಿ ಮಾಡಿದೆ. ಈ ನೂತನ ಮಾರ್ಗ ಸೂಚಿಯ ಪ್ರಕಾರ ಜಿಲ್ಲೆಯಲ್ಲಿ ಮೇ.10 ರ ಬೆಳಿಗ್ಗೆ 6 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಿಆರ್ ಪಿಸಿ ಸೆಕ್ಷನ್ 144(3) ಅನ್ವಯ ಮುಂದಿನ ಆದೇಶದ ಅವರೆಗೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.ಈ ಕುರಿತು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ನಿಷೇದಾಜ್ಞೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕೆಲವೊಂದು ಚಟುವಟಿಕೆಗಳಿಗೆ  ಮಾತ್ರ ಅವಕಾಶ ನೀಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು,  ಮಾಂಸ ಮತ್ತು ಮೀನು ಮತ್ತು ಪಶು ಆಹಾರ ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.


ಎಲ್ಲಾ ವೈದ್ಯಕೀಯ ಸೇವೆಗಳು (ಆಯುಷ್ ಮತ್ತು ಪಶುವೈದ್ಯಕೀಯ ಆಸ್ಪತ್ರೆಗಳನ್ನು ಒಳಗೊಂಡು) ಕಂಟೈನ್ಮೆಂಟ್ ವಲಯದ ಹೊರಗಡೆ ಕಾರ್ಯಾಚರಣೆಯಲ್ಲಿರುತ್ತದೆ. ಕೃಷಿ ಮತ್ತು ಕೃಷಿ ಸಂಬಂಧಿಸಿದ ಕೆಲಸಗಳಿಗೆ (ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗೆ ) ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಕಂಟೈನ್‌ ಮೆಂಟ್‌ ವಲಯದ ಹೊರಗಿನ ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಖಾಲಿ ಸರಕು ಸಾಗಾಣಿಕಾ ವಾಹನಗಳೂ ಸೇರಿದಂತೆ ಎಲ್ಲಾ ರೀತಿಯ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ಅನುಮತಿಸಲಾಗಿದೆ.


ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ  ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಪಾರ್ಸೆಲ್‌ ಕೊಂಡು ಹೋಗಲು ಮಾತ್ರ ಅನುಮತಿಸಲಾಗಿದೆ. ತಳ್ಳು ಗಾಡಿಗಳ ಮುಖಾಂತರ ಹಣ್ಣು ಮತ್ತು ತರಕಾರಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ಯವರೆಗೆ ಮಾರಾಟ ಮಾಡಲು ಅನುಮತಿಸಲಾಗಿದೆ. ಬೆಳಿಗ್ಗೆ 6.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೂ ಹಾಪ್‌ ಕಾಮ್ಸ್‌ , Karnataka Milk Federation (KMF) ಹಾಲಿನ ಬೂತು ಮಾತ್ರ  ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್‌ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸಲಾಗಿದೆ. ಎಲ್ಲಾ ಆಹಾರ ಸಂಸ್ಕರಣೆ ಮತ್ತು ಸಂಬಂಧಿತ ಕೈಗಾರಿಕೆಗಳು. ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂ., ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ., ದೂರಸಂಪರ್ಕ, ಇಂಟರ್ನೆಟ್ ಸೇವೆಗಳು, ಪ್ರಸಾರ ಮತ್ತು ಕೇಬಲ್ ಸೇವೆಗಳು. ಗುರುತಿನ ಚೀಟಿಯನ್ನು ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಅನಿಯಂತ್ರಿತ ಸಂಚಾರವನ್ನು ಅನುಮತಿಸಲಾಗಿದೆ.


IT ಹಾಗೂ ITeS ಕಂಪನಿಗಳ ಅವಶ್ಯ ಸಿಬ್ಬಂದಿಗಳು ಮಾತ್ರವೇ ಕಛೇರಿಗಳಲ್ಲಿ ಕಾರ್ಯನಿರ್ವಹಿಸುವುದು ಉಳಿದ ಸಿಬ್ಬಂದಿಗಳು ಮನೆಯಿಂದಲೇ ಕಾರ್ಯನಿರ್ವಹಿಸುವುದು. ಹೋಮ್‌ ಡೆಲಿವರಿ ಹಾಗೂ ಎಲ್ಲಾ ರೀತಿಯ ಇ-ಕಾಮರ್ಸ್‌ ಸೇವೆಗಳನ್ನು ಅನುಮತಿಸಲಾಗಿದೆ.  ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಣಾ ಘಟಕಗಳು ಮತ್ತು ಸೇವೆಗಳು.ಖಾಸಗಿ ಭದ್ರತಾ ಸೇವೆಗಳನ್ನು ಅನುಮತಿಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಕೋವಿಡ್‌ ಮಾರ್ಗ ಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿ ಗೊಳಪಟ್ಟು 50 ಜನರ ಸೇರುವಿಕೆಗೆ ಅವಕಾಶ ಕಲ್ಪಿಸಲಾಗಿದೆ. ಶವಸಂಸ್ಕಾರ / ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.


ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್‌ ಗಳು ಟ್ಯಾಕ್ಸಿಗಳ ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್‌ ಗಳನ್ನೇ ಪಾಸ್‌ ಗಳಂತೆ ಬಳಸಿಕೊಳ್ಳಬಹುದಾಗಿದೆ.


ಮಾಸ್ಕ್ ಧರಿಸುವುದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅತ್ಯವಶ್ಯಕ ಕ್ರಮವಾಗಿದ್ದು, ಮುಖಗವಸುಗಳನ್ನು ಧರಿಸದ ವ್ಯಕ್ತಿಗಳ ವಿರುದ್ಧ  ಮಹಾ ನಗರ  ಪಾಲಿಕೆ ಪ್ರದೇಶಗಳಲ್ಲಿ  ರೂ. 250/- ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100/- ದಂಡ ವಿಧಿಸಲಾಗುವುದು. ಕೋವಿಡ್‌ ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು.

ಈ  ಆದೇಶಗಳನ್ನು  ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು Disaster Management Act  2005 , ಮತ್ತು  IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ  ಎಂದು ಆದೇಶ ದಲ್ಲಿ ತಿಳಿಸಲಾಗಿದೆ.


 ಜಾಹೀರಾತು 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget