ಬೆಳ್ಮಣ್:ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮ-Times of karkala

ಬೆಳ್ಮಣ್:ರೋಟರಿ ಕ್ಲಬ್ ಬೆಳ್ಮಣ್ ಇದರ ನೇತೃತ್ವದಲ್ಲಿ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ನಂದಳಿಕೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮ ನಡೆಯಿತು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರಕಾರದ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್  ಬಿಳಿಬೆಂಡೆಯ ಬೀಜ ವಿತರಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಅತ್ಯಧಿಕ ಪೌಷ್ಠಿಕಾಂಶವುಳ್ಳ  ಬಿಳಿಬೆಂಡೆಯನ್ನು ಎಲ್ಲರೂ ತಮ್ಮ ಮನೆಯಂಗಳದಲ್ಲಿ ಬೆಳೆಸಿ, ಮುಂದಿನ ದಿನಗಳಲ್ಲಿ ಕಾರ್ಕಳ ಬಿಳಿಬೆಂಡೆ ಹೆಸರಲ್ಲಿ ವ್ಯವಸ್ಥಿತ ಮಾರುಕಟ್ಟೆ ಒದಗಿಸುವ ಕಾರ್ಯಯೋಜನೆ ಮಾಡಲಾಗಿದೆ ಎಂದು ನುಡಿದರು.

ಮುಖ್ಯ ಅತಿಥಿ ರೇಷ್ಮಾ ಉದಯಕುಮಾರ್ ಶೆಟ್ಟಿ ಮಾತನಾಡಿ "ಶಾಸಕರ ಕನಸಿನ ಯೋಜನೆಯಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಕೈಜೋಡಿಸಿ ಕಾರ್ಯಪ್ರವೃತ್ತರಾದಲ್ಲಿ  ಕಾರ್ಕಳ ಕ್ಷೇತ್ರವನ್ನು ಸ್ವರ್ಣ ಕಾರ್ಕಳ ಕ್ಷೇತ್ರವಾಗಿ ಪರಿವರ್ತಿಸುವುದು ಕಷ್ಟದ ವಿಷಯವೇ ಅಲ್ಲ" ಎಂದು ನುಡಿದರು. 

ಬೆಳ್ಮಣ್ ರೋಟರಿಯ ಸ್ಥಾಪಕಾಧ್ಯಕ್ಷ ರೋ| ಸೂರ್ಯಕಾಂತ ಶೆಟ್ಟಿ, ಹಾಗೂ ರೋಟರಿ ಬೆಳ್ಮಣ್ಣೀನ ಪೂರ್ವಾಧ್ಯಕ್ಷ ರೋ| ದೇವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್, ಜೇಸಿ ಐ, ಬೆಳ್ಮಣ್ ಸ್ಪೋರ್ಟ್ಸ್ ಕ್ಲಬ್, ಗುರುದುರ್ಗಾ ಮಿತ್ರ ಮಂಡಳಿ, ಕವಿ ಮುದ್ದಣ್ಣ ಮಿತ್ರ ಮಂಡಳಿ ನಂದಳಿಕೆ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಉಪಸ್ಥಿತರಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಬೆಳ್ಮಣ್ ನ ಅಧ್ಯಕ್ಷ ರೋ|  ಸುಭಾಷ್ ಕುಮಾರ್ ವಹಿಸಿ ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ರೋ| ರವಿರಾಜ್ ಶೆಟ್ಟಿ ವಂದಿಸಿದರು.

 ಜಾಹೀರಾತು 
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget