ನಿಟ್ಟೆ:ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಕಾರು!-Times of karkala

 

ನಿಟ್ಟೆ:ಅತೀ ವೇಗದಿಂದ ಬಂದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಘಟನೆ ನಿಟ್ಟೆ ಲೇಮಿನ ಕ್ರಾಸ್ ಬಳಿ ದಿನಾಂಕ 13/08/2021 ರಂದು ಮಧ್ಯಾಹ್ನ 2:00 ಗಂಟೆಗೆ ನಡೆದಿದೆ.

ಸಾಣೂರಿನ ಮಿಶಾಲ್ ಎಂಬುವವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕಾರ್ಪಿಯೋ ಕಾರು ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ನಿಟ್ಟೆ ಗ್ರಾಮದ ದೂಪದಕಟ್ಟೆ  ಲೆಮಿನಾ ಕ್ರಾಸ್ ಬಳಿ  ರಸ್ತೆಯ ತೀರಾ ಬಲಭಾಗಕ್ಕೆ ಚಲಾಯಿಸಿ ರಸ್ತೆ ಬದಿಯಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ.

ಕಾರಲ್ಲಿ ಇನ್ನೂ ಈರ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಜಾಹೀರಾತು 








Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget