ದಿನಾಂಕ 18-09-2021 ಶನಿವಾರ ಇಂದಿನ ದಿನ ಭವಿಷ್ಯ

*ದಿನ ಭವಿಷ್ಯ*
*ಮೇಷ:* ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 1

*ವೃಷಭ:* ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9

*ಮಿಥುನ:* ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 2

*ಕಟಕ:* ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 8

*ಸಿಂಹ:* ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 3

*ಕನ್ಯಾ:* ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 6

*ತುಲಾ:* ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 4

*ವೃಶ್ಚಿಕ:* ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 5

*ಧನು:* ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 9

*ಮಕರ:* ಸಜ್ಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 1

*ಕುಂಭ:* ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 3

*ಮೀನ:* ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 6

ರಾಜು ಪೊದುವಾಳ್: +919448910709
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget