ಕಾರ್ಕಳ:ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ-Times of karkala

 


ಕಾರ್ಕಳ:ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ   
ಕಾರ್ಕಳ:ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ   

ಕಾರ್ಕಳ 28 ಸೆಪ್ಟೆಂಬರ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು  ವರ್ಚುವಲ್ ವೇದಿಕೆಯ ಮೂಲಕ  2021ರ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪಾಲ್ ಕಾರ್ಡ್ "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಈ ವರ್ಷದ ದ್ಯೇಯ ವಾಕ್ಯ. ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ  ಮತ್ತು ಮಧ್ಯ ಕರ್ನಾಟಕದ  ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ" ಎಂದು ಅವರು ಹೇಳಿದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು “1 ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹500/-, ಕುಟುಂಬಕ್ಕೆ ₹800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹950/- ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು,
ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ
●ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ  50 ರಿಯಾಯಿತಿ
●ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ  30 ರಿಯಾಯಿತಿ
●ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ  ಶೇಕಡಾ 20 ರಿಯಾಯಿತಿ
●ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20  ರಿಯಾಯಿತಿ
●ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ
●ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ 
●ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ  ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. 

ಪತ್ರಿಕಾಗೋಷ್ಟಿಯಲ್ಲಿ ಡಾ. ಕೀರ್ತಿನಾಥ ಬಲ್ಲಾಳ, ಮುಖ್ಯ ವೈದ್ಯಾಧಿಕಾರಿಗಳು, ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ, ಟಿ ಎಂ ಎ ಪೈ ಆಸ್ಪತ್ರೆ ಕಾರ್ಕಳದ  ನಟೇಶ್ ಕುಮಾರ್, ಪ್ರತಿನಿಧಿಯಾದ ಶ್ರೀ ಶ್ರೀನಿವಾಸ್ ಭಾಗವತ್ ಹಾಗೂ ಶ್ರೀ ಚೇತನ್ ಇವರೆಲ್ಲರೂ ಉಪಸ್ಥಿತರಿದ್ದರು.


ಜಾಹೀರಾತು  
   

  


 
        
 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget