ಷರತ್ತುಬದ್ಧ ನಿಯಮಗಳೊಂದಿಗೆ 5 ದಿನಗಳ ಗಣೇಶೋತ್ಸವ ಆಚರಣೆಗೆ ಅನುಮತಿ-Times of karkala

 ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವ ಆಚರಣೆಗೆ 5 ದಿನಗಳ ಅನುಮತಿ ನೀಡಿಲಾಗಿದೆ. ಷರತ್ತಿನ ಅನುಮತಿಯೊಂದಿಗೆ ರಾಜ್ಯದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

– ದೇವಸ್ಥಾನ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ

– ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಹಾಗೂ ಮನೆಯೊಳಗೆ ಎರಡು ಅಡಿ ಎತ್ತರದ ಗಣೇಶ ಮೂರ್ತಿಗಳಿಗೆ ಅನುಮತಿ ನೀಡಲಾಗಿದೆ.

– ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಮುನಿಸಿಪಲ್ ಕಾರ್ಪೋರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು.

– ಒಂದು ನಗರ ಪುದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ

– ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ

– ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು, ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.

– ಆಯೋಜಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ

– ಗಣೇಶ ಆಚರಣೆಯ ಆಯೋಜಿತ: ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು

– ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗಬಾರದು

– ಯಾವುದೇ ರೀತಿ ಸಾಂಸ್ಕøತಿಕ, ಸಂಗೀತ, ನೃತ್ಯ, ಡಿ.ಜೆಗಳಂಥ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ

– ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆಗಳಿಗೆ ಸಂಪೂರ್ಣ ನಿಬರ್ಂಧ

– ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೂಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಬೇಕು.


– ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು


– ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಟ್ರೈನಿಂಗ್ ವ್ಯವಸ್ಥೆ ಕಲ್ಪಿಸಬೇಕು


– ಭಕ್ತಾಧಿಗಳಿಗೆ 6 ಅಡಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದೆ.


– ಬೀದಿ ಬೀದಿಗಳಲ್ಲಿ ಗಣೇಶ ಕೂರಿಸಲು ಅನುಮತಿ ಇಲ್ಲ


– ವಾರ್ಡ್‍ಗೊಂದು, ಗ್ರಾಮಕ್ಕೊಂದು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ


– ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ, ತಾಲ್ಲೂಕುಗಳಲ್ಲಿ ಪಾಸಿಟಿವಿಟಿ ದರ 2% ಕ್ಕಿಂತ ಕಮ್ಮಿ ಇದ್ರೆ ಮಾತ್ರ ಹಬ್ಬಕ್ಕೆ ಅವಕಾಶ

ಜಾಹೀರಾತು 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget