ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅವನಿ ಒಂದೇ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು-Times of karkala

ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಒಂದೇ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಈ ಮೊದಲು ಅವನಿ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದೀಗ 50 ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡು, ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. 


ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ  ಅವನಿ ಲೇಖರಾ ಕಂಚಿನ ಪದಕ ಗೆದ್ದ ಅವನಿ 

ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 

ಜಾಹೀರಾತು 
















Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget