ಕಾರ್ಕಳ:ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ಕೇಸು ದಾಖಲು-Times of karkala

 ಮತಾಂತರ ನಡೆಸುತ್ತಿದ್ದಾರೆ ಎಂದು ಆರೋಪದ ಮೇರೆಗೆ ಕುಕ್ಕುಂದೂರು ಗ್ರಾಮದ ನಕ್ರೆ ಬಳಿಯ ಆನಂದಿ ಮೈದಾನ ಪ್ರಗತಿ ಟ್ರಸ್ಟ್ ನ ಪ್ರಾರ್ಥನಾ ಸ್ಥಳಕ್ಕೆ  ದಾಳಿ ನಡೆಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ಕೇಸು ದಾಖಲಾಗಿದೆ.


ಬೆನಡಿಕ್ಟ್ ಎಂಬುವವರು ಪ್ರಕರಣ ದಾಖಲಿಸಿದ್ದಾರೆ. ಕುಕ್ಕುಂದೂರು ಗ್ರಾಮದ ನಕ್ರೆ ಬಳಿ ಮಂಗಳೂರು KACES ಎಂಬ ಸಂಸ್ಥೆ ವತಿಯಿಂದ ನಡೆಸುವ ಪ್ರಗತಿ ಟ್ರಸ್ಟ್ ನಲ್ಲಿ ಇನ್ನಿತರ ವ್ಯಕ್ತಿಗಳೊಂದಿಗೆ ಸೇರಿ ಪ್ರಾರ್ಥನೆ ನಡೆಸುತ್ತಿರುವ ಸಂದರ್ಭ ಸುಮಾರು 25 ರಿಂದ 30 ಜನ ಹಿಂದೂ ಪರ ಸಂಘಟನೆ ಕಾರ್ಯಕರ್ತರು  ಪ್ರಾರ್ಥನೆ ನಡೆಸುತ್ತಿದ್ದ ಕಟ್ಟಡಕ್ಕೆ ಪ್ರವೇಶಿಸಿ ಏಕಾಏಕಿ ದಾಳಿ ನಡೆಸಿ ಪ್ರಾರ್ಥನೆ ನಡೆಸುತ್ತಿದ್ದ ಹೆಂಗಸರು, ಗಂಡಸರು ಮತ್ತು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು, ದೈಹಿಕವಾಗಿ ಹಲ್ಲೆ ನಡೆಸಿ, ಒರ್ವ ಹೆಂಗಸಿನ ಕೈಯನ್ನು ಹಿಡಿದು ಎಳೆದಿದ್ದಲ್ಲದೇ, ಪ್ರಾರ್ಥನೆ ನಡೆಸುತ್ತಿದ್ದವರಿಗೆ ಇತರರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.





 

   

  


 
        


ಜಾಹೀರಾತು 











Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget